ದೇವನಹಳ್ಳಿ: ವಿಮಾನದಲ್ಲಿ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಯಾಣಿಕ ರಣಬೀರ್ ಸಿಂಗ್ ಎಂದು ತಿಳಿದು ಬಂದಿದೆ.
ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ 6E556 ಇಂಡಿಗೋ ವಿಮಾನದಲ್ಲಿ ರಣದೀರ್ ಸಿಂಗ್ ನಶೆಯಲ್ಲಿ ಪ್ಲೈಟ್ ಕ್ಯಾಬಿನ್ ಸ್ಟಾಪ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಸಂಬಂಧ ಪೊಲೀಸರು ರಣಬೀರ್ ಸಿಂಗ್ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.