image

ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ: ಮೂವರಿಗೆ ಗಂಭೀರ

  November 20,2023
news-banner
image
image
ವಿಟ್ಲ: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಂಬಳಬೆಟ್ಟುವಿನಲ್ಲಿ ಭಾನುವಾರ ಸಂಜೆ ನಡೆದಿದೆ.

ಉರಿಮಜಲು ಸಮೀಪ ಸಿಮೇಟ್ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲದ ಸತೀಶ್ ಹಾಗೂ ವಸಂತ್ ಗಾಯಗೊಂಡ ಕಾರ್ಮಿಕರು ಎಂದು ತಿಳಿದು ಬಂದಿದೆ.

ಘಟನೆ ನಡೆದ ಕೂಡಲೇ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದೆ ಎಂದು ತಿಳಿದು ಬಂದಿದೆ. 

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

image
image
image
image
image

Leave Your Comments