ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ: ಪತ್ನಿ ಸಾವು, ಪತಿ ಗಂಭೀರ

  November 20,2023
news-banner
ಉಡುಪಿ: ಸಂಬಂಧಿಕರ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮಕ್ಕೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ಪೆಟ್ರೋಲ್ ಪಂಪ್ ಬಳಿ ರಸ್ತೆ ದಾಟುತ್ತಿದ್ದ ದಂಪತಿಗೆ ಬೈಕ್ ಡಿಕ್ಕಿ ಹೊಡೆದು ಪತ್ನಿ ಸಾವನ್ನಪ್ಪಿದ್ದು, ಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತ ಮಹಿಳೆ ಪಾಂಗಾಳ ಸಾದಾದಿ ಪಡುಮನೆ ಶೇಖರ್ ಶೆಟ್ಟಿ ಅವರ ಪತ್ನಿ ವಿಜಯ ಶೆಟ್ಟಿ (61) ಎಂದು ತಿಳಿದು ಬಂದಿದೆ. 

ಅಪಘಾತದ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಸ್ಥಳೀಯರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ಶೇಖರ್ ಶೆಟ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave Your Comments