ಬೀಳಗಿ: ಕೆಎಸ್ಆರ್‌ಟಿಸಿ ಇಲಾಖೆಯ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಸ್ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೀಳಗಿ ಡಿಪೋದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ ಎಂದು ತಿಳಿದು ಬಂದಿದೆ. 3 ದಿನಗಳಾದರೂ ಮೇಲಧಿಕಾರಿ ರಜೆ ಕೊಡದೆ ನಿರಂತರವಾಗಿ ಕೆಲಸ ಮಾಡಿಸುತ್ತಿದ್ದಾರೆ ಎನ್ನಲಾಗಿದೆ.
ಇದರಿಂದ ಮನನೊಂದಿರುವ ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ತಕ್ಷಣ ಸಂಬಂಧಿಕರು, ಸ್ಥಳೀಯ ಬೀಳಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೀಳಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದುಚಿಕಿತ್ಸೆ ಮುಂದುವರೆಸಲಾಗಿದೆ.
ಸದ್ಯ ಚಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತನ್ನ ಈ ಸ್ಥಿತಿಗೆ ಡಿಪೋದ ಮೇಲಧಿಕಾರಿ ಕಾಡರಕೊಪ್ಪ ಎಂಬವರೇ ಕಾರಣ, ಅವರ ಕಿರುಕುಳದಿಂದ ಹೀಗೆ ಮಾಡಿದ್ದೇನೆ ಎಂದು ಹೇಳಿದ್ದಾರೆ.