ಸುರತ್ಕಲ್: ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್ (30) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಕಿರ್ ತನ್ನ 4ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಮೇಲ್ಸವೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿರ್ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.
ಬಳಿ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅವರು ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಎನೆಪೊಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಶಾಕಿರ್ ಅವರ ಮೃತದೇಹ
ಮೃತದೇಹವನ್ನು ಮೇಲೆತ್ತುತ್ತಿರುವುದು.