ಉತ್ತರ ಪ್ರದೇಶ: ಕಾನ್ಪುರದಲ್ಲಿ ಹತ್ತನೇ ತರಗತಿ ಓದುತ್ತಿರುವ ಬಾಲಕನನ್ನು ಪ್ರೀತಿಸಿ ಲೈಂಗಿಕ ಕ್ರಿಯೆ ನಡೆಸಿದ್ದ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹತ್ತನೇ ತರಗತಿ ಓದುತ್ತಿರುವ ಬಾಲಕನನ್ನು ಶಿಕ್ಷಕಿ ಪ್ರೀತಿಸುತ್ತಿದ್ದಾಳೆ ಎಂದು ಬಾಲಕನ ತಂದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಶಿಕ್ಷಕಿ ತನ್ನ ಮಗನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಮತಾಂತರ ಮಾಡಲು ಯತ್ನಿಸುತ್ತಿದ್ದಾಳೆ. ಈ ಕುರಿತು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಾಲಕನ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನ್ಯಾಯಾಲಯದ ಆದೇಶದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.