ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ಅಶ್ಪಕ್ ಹಾಗೂ ಶೌಖತ್ ಅಲಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಇವರಿಬ್ಬರು ಟಿಪ್ಪು ಸುಲ್ತಾನ್ ಕಾಲಿನಡಿ ಕುಳಿತು ಶಿವಾಜಿ ಬೇಡಿಕೊಳ್ಳುವ ಹಾಗೆ ಫೊಟೋವನ್ನು ಎಡಿಟ್ ಮಾಡಿ, ಆ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಕಲಘಟಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಅಶ್ಫಕ್ ಹಾಗೂ ಶೌಖತ್ ಅಲಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.