ಮೈಸೂರು: ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ.
25 ವರ್ಷದ ಯುವಕ 34 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದು ಯುವಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದಳು. ಸಿಂಗಿಂಗ್ ಇವೆಂಟ್ಗೆ ಹಾಡು ಹೇಳಲು ಹೋಗುತ್ತಿದ್ದಾಗ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್ ಎಂಬಾತನ ಪರಿಚಯವಾಯಿತು.
ಬಳಿಕ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮನೆಗೆ ಹರೀಶ್ ಆಗಾಗ ಹೋಗುತ್ತಿದ್ದ. ಒಮ್ಮೆ ಮದ್ಯ ಕುಡಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈಗ ಮಹಿಳೆ ಗರ್ಭಿಣಿಯಾಗಿದ್ದು ಆರೋಪಿ ಹರೀಶ್ ಪರಾರಿಯಾಗಿದ್ದಾನೆ. ಅಲ್ಲದೆ ಆರೋಪಿ ಹರೀಶ್ ಸಂಬಂಧಿ ಕೊಳ್ಳೇಗಾಲದಲ್ಲಿ ಸ್ಟಾಫ್ ನರ್ಸ್ ಆಗಿದ್ದಾನೆ. ಅವನ ಸಹಾಯದಿಂದ ಗರ್ಭಪಾತದ ಮಾತ್ರೆಗಳನ್ನು ತರಸಿ ನನಗೆ ನೀಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.
ಆರೋಪಿ ಹರೀಶನ ಮನೆಯವರು ಮದುವೆಗೆ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.