ಕಾಪು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

  June 11,2024
news-banner
ಕಾಪು: ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಎಂದು ತಿಳಿದು ಬಂದಿದೆ. 

ಈತ 2023ರ ಅ.15ರಿಂದ 25ರ ನಡುವಿನ ಅವಧಿಯಲ್ಲಿ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದ ಎಂದು ತಿಳಿದು ಬಂದಿದೆ. 

ಎರಡು ತಿಂಗಳ ಬಳಿಕ ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ತಿಳಿದು ಬಂದಿದೆ.

ಬಾಲಕಿಯನ್ನು ಶಿವಮೊಗ್ಗ ಸುರಭಿ ಉಜ್ವಲ ಕೆಂದ್ರಕ್ಕೆ ದಾಖಲಿಸಲಾಗಿತ್ತು.

ಶಿರಾಳಕೊಪ್ಪ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಕಾಪು ಠಾಣೆಗೆ ವರ್ಗಾಯಿಸಿದ್ದು, ನೊಂದ ಬಾಲಕಿಯ ಹೇಳಿಕೆಯಂತೆ 2024ರ ಮಾ. 19ರಂದು ಚೇತನ್‌ ಯಾನೆ ತಿಪ್ಪೇಶ್‌ನ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೆ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿಯ ಜಾಡು ಹಿಡಿದ ಕಾಪು ಠಾಣೆಯ ಪೊಲೀಸರು ಬಳ್ಳಾರಿಗೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗೆ ನ್ಯಾಯಾಲಯವು ಜೂ. 20ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ. 

Leave Your Comments