ಬಂಟ್ವಾಳ: ಬಡಗಬೆಳ್ಳೂರಿನ ಸಾರ್ವಜನಿಕ ಸ್ಥಳದಲ್ಲಿ ತಂಡವೊಂದು ತಲವಾರು ಹಿಡಿದುಕೊಂಡು ಜನರಿಗೆ ಭಯವನ್ನುಂಟು ಮಾಡಿದ ಘಟನೆ ನಡೆದಿದೆ.
ಆರೋಪಿಗಳಾದ ಭೋಜರಾಜ, ವಿನೋದ್, ವಿವೇಕ್, ರಕ್ಷಿತ್, ರಕ್ಷಕ್ ಅವರು ತಲವಾರು ಹಿಡಿದುಕೊಂಡು ಜನರಿಗೆ ಭಯವನ್ನುಟ್ಟು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನಾ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ಐ ಹರೀಶ್ ಎಂ.ಆರ್. ಅವರ ತಂಡ ದಾಳಿ ನಡೆಸಿದ್ದು, ಆರೋಪಿಗಳು ಪೊಲೀಸ್ ಜೀಪನ್ನು ಕಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಅಲ್ಲೇ ಪಕ್ಕದಲ್ಲಿ ನಿಂತಿದ್ದ ಆಟೋ ರಿಕ್ಷಾವನ್ನು ಪರಿಶೀಲಿಸಿದಾಗ ತಲವಾರು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ಶಸ್ತಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.