ರಾಮನಗರ: ಬೆಟ್ಟಿಂಗ್ ಕಟ್ಟಿ ಸಾಲದ ಸುಳಿಗೆ ಸಿಲುಕಿದ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ತಾಲೂಕಿನ ಬಿಡದಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕೆಂಚನಕುಪ್ಪೆ ನಿವಾಸಿ ಶಿವರಾಜು (44) ಎಂದು ತಿಳಿದು ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರ ಪರ 50 ಲಕ್ಷಕ್ಕೂ ಅಧಿಕ ಹಣವನ್ನು ಬೆಟ್ಟಿಂಗ್ ಕಟ್ಟಿದ್ದರು ಎನ್ನಲಾಗಿದೆ.
ಬೆಟ್ ಕಟ್ಟಿದ್ದ ಅಭ್ಯರ್ಥಿ ಸೋಲುತ್ತಿದ್ದಂತೆ ಬೆಟ್ಟಿಂಗ್ ಹಣ ಕೇಳಿದ್ದು, ಕೊಡಲು ದುಡ್ಡಿಲ್ಲದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಿಡದಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.