ಬೆಂಗಳೂರು: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೆಟ್ರೋ ಹಳಿಗೆ ಹಾರಿದ್ದ ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ.
ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡಿದ್ದಾರೆ ಎಂದು ತಿಳಿದು ಬಂದಿದೆ.