ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ; ಓರ್ವ ಮಹಿಳೆ ಸಾವು

  June 11,2024
news-banner
ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿರುವ ಘಟನೆ ವರದಿಯಾಗಿದೆ‌.

ಮೃತ ಮಹಿಳೆ ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಎಂದು ತಿಳಿದು ಬಂದಿದೆ. 

ಉಳ್ಳಾಲ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Leave Your Comments