ಕೊಲೆ ಪ್ರಕರಣ: ನಟ ದರ್ಶನ್‌ ಸ್ನೇಹಿತೆ ನಟಿ ಪವಿತ್ರಾ ಗೌಡ ಪೊಲೀಸ್‌ ವಶಕ್ಕೆ

  June 11,2024
news-banner
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಹಾಗೂ ಆಶ್ಲೀಲ, ಫೋಟೋ ವಿಡಿಯೋಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ.

ಇದಾದ ಬಳಿಕ ಗುಂಪು ಸೇರಿಕೊಂಡು ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಶೆಡ್ ವೊಂದರಲ್ಲಿ ಇಟ್ಟು, ಹಲ್ಲೆಗೈದು ಕೊಲೆ ಮಾಡಿ ಮೃತದೇಹವನ್ನು ಮೋರಿಯೊಂದಕ್ಕೆ ಎಸೆದಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಪೊಲೀಸರಿಗೆ ಅಪಾರ್ಟ್‌ಮೆಂಟ್‌ ವೊಂದರ ಭದ್ರತಾ ಸಿಬ್ಬಂದಿಯೊಬ್ಬರು ಮೃತದೇಹವನ್ನು ನಾಯಿಗಳು ಎಳೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮೊದಲಿಗೆ ಆರೋಪಿಗಳು ಬೇರೆ ಕಾರಣಗಳನ್ನು ನೀಡಿದ್ದರು, ಬಳಿಕ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದಿದ್ದಾರೆ.

ಪೊಲೀಸರು ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ನಟ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಪ್ರಕರಣ ಸಂಬಂಧ ಆರ್ ಆರ್ ನಗರ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಪವಿತ್ರಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Leave Your Comments