ಮಣಿಪಾಲ: ಸ್ಕೂಟರ್ ಡಿವೈಡರ್ ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಯುವಕ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತನನ್ನು ಹೊಟೆಲ್’ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕೇಶವ (18) ಎಂದು ಗುರುತಿಸಲಾಗಿದೆ.
ಡಿ.ಸಿ ಆಪೀಸ್ ರಸ್ತೆಯಲ್ಲಿ ಅಪಘಾತವಾಗಿದ್ದು ಕೂಡಲೇ ಆಟೋ ರಿಕ್ಷಾದಲ್ಲಿ ಕೆ.ಎಂ.ಸಿ ಆಸ್ಪತ್ರೆಗ ಕರೆದುಕೊಂಡು ಹೋಗಲಾಗಿತ್ತು.
ವೈದ್ಯರು ಕೇಶವ್ ರವರನ್ನು ಪರೀಕ್ಷಿಸಿ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.