ಬಳ್ಳಾರಿ: ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೇರಿಕೆಯಾಗಿದೆ.
ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ತಿಳಿದು ಬಂದಿದೆ.
ಬಳಿಕ ಅವರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.