ವಿಟ್ಲ: ವಿಟ್ಲ ಚಂದಳಿಕೆ ತಿರುವಿನಲ್ಲಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ಅತೀ ವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ ಎಂದು ತಿಳಿದು ಬಂದಿದೆ.
ಕೂಡಲೇ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.