ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಪ್ರಜ್ವಲ್ (16) ಎಂದು ತಿಳಿದು ಬಂದಿದೆ.
ರಂಗಾಪುರ ಗ್ರಾಮದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್ ಹೊಳಲ್ಕೆರೆ ವಾಗ್ಗೇವಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಪರೀಕ್ಷೆಗೆ ಪ್ರಜ್ವಲ್ ಹಾಜರಾಗದ ಹಿನ್ನೆಲೆಯಲ್ಲಿ ಶಾಲೆ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬಾ ಎಂದಿದ್ದಾರೆ.
ಭಾನುವಾರ ಸಂಜೆ ಪ್ರಜ್ವಲ್ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.