ರಾಮನಗರ: ಚನ್ನಪಟ್ಟಣ ತಾಲೂಕಿನ ಅಬ್ಬೂರುದೊಡ್ಡಿ ಗ್ರಾಮದಲ್ಲಿ ಸೊಸೆಯೊಬ್ಬಳು ಅತ್ತೆಯನ್ನು ಮನೆ ಬಿಟ್ಟು ಹೋಗುವಂತೆ ಹೇಳುತ್ತ ಮನಸೋ ಇಚ್ಛೆ ಥಳಿಸಿರುವ ವೀಡಿಯೊ ವೈರಲ್ ಆಗಿದೆ.
ತಾಯಿಯ ಮೇಲೆ ಪತ್ನಿ ಹಲ್ಲೆ ಮಾಡುತ್ತಿದ್ದರೆ ಮಗನೇ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಆದ ಬಳಿಕ ಪೊಲೀಸರು ಸೊಸೆ ಸಂಜನಾ ಮತ್ತು ಮಗ ರವೀಂದ್ರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಸಂಜನಾ ಮತ್ತು ರವೀಂದ್ರ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.