ಕಾರ್ಕಳ: ಕಾರ್ಕಳದ ಕಮಲಾಕ್ಷ ನಗರ ಎಂಬಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಹಾಕಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಬ್ಯಾನರ್‌ನಲ್ಲಿ ಹೆಸರು ಉಲ್ಲೇಖಿಸಿದ್ದ ಸ್ಥಳೀಯ ನಿವಾಸಿ ಸತೀಶ್ ದೇವಾಡಿಗ ಹಾಗೂ ಬ್ಯಾನರ್ ಮುದ್ರಿಸಿದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಅಮೂಲ್ಯ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಎಂದು ತಿಳಿದು ಬಂದಿದೆ.
ಮುಸ್ಲಿಮರ ಕುರಿತು ಅವಹೇಳನಕಾರಿ ಬರಹಗಳೊಂದಿಗೆ ಹಾಕಲಾದ ಬ್ಯಾನರ್ ಸೆ.2ರಂದು ಪ್ರತ್ಯಕ್ಷವಾಗಿದ್ದು, ಇದರಲ್ಲಿ ಸತೀಶ್ ದೇವಾಡಿಗ ತನ್ನ ಹೆಸರು ಹಾಗೂ ತಾನು ಸ್ವಾತಂತ್ರ್ಯ ಹೋರಾಟಗಾರ ಎಂಬುದಾಗಿ ಬರೆದುಕೊಂಡಿದ್ದನು.
ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತರ ಪೈಕಿ ಸತೀಶ್ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಪುಷ್ಪಲತಾಳನ್ನು ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.