ಕರ್ತವ್ಯಲೋಪವೆಸಗದ ಪಿಎಸ್ಐ ಅಮಾನತು

  December 7,2024
news-banner
ರಾಯಚೂರು: ರಾಯಚೂರು ಗ್ರಾಮಾಂತರ ವ್ಯಾಪ್ತಿಯ ಇಡಪನೂರು ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಮಾನತ್ತಾದ ಪೊಲೀಸ್ ಅಧಿಕಾರಿ ಅವಿನಾಶ್ ಕಾಂಬ್ಳೆ ಎಂದು ತಿಳಿದು ಬಂದಿದೆ.

ಕರ್ತವ್ಯದಲ್ಲಿ ಲೋಪ ಮತ್ತು ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಡಪನೂರು ಪಿಎಸ್‌ಐ ಅವಿನಾಶ್ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಪಘಾತ ನಡೆದ ವೇಳೆ ಸ್ಥಳ ಪರಿಶೀಲನೆಯ ವಿಳಂಬ, ಠಾಣೆಯಲ್ಲಿ ಸರಿಯಾಗಿ ಹಾಜರಾಗದಿರುವುದು ಹಾಗೂ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿರುವುದು ಹೀಗೆ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಇಡಪನೂರು ಪಿಎಸ್ಐ ಅವರನ್ನು ಅಮಾನತು ಮಾಡಲಾಗಿದೆ.

Leave Your Comments