ಕುದೂರು: ಕುದೂರು ಪೂಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ಬದಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ ಹಿಂಬದಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿಯಾಗಿ ಚಾಲಕ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಸಂಭವಿಸಿದೆ.
ಚಿಕ್ಕಮಗಳೂರು ಕಡೆಯಿಂದ ಬೆಂಗಳೂರಿಗೆ ಅತಿ ವೇಗವಾಗಿ ಬರುತ್ತಿದ್ದ ಕೆಎಸ್ಆರ್ ಟಿಸಿ (ಅಶ್ವಮೇಧ) ಬಸ್ ಸೂಲೂರು ಬಳಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನೊಳಗೆ ಸಿಲುಕಿದ ಚಾಲಕನನ್ನು ಸ್ಥಳೀಯರು ಜೆಸಿಬಿ ಮೂಲಕ ಬಸ್ ನ ಅವಶೇಷಗಳನ್ನು ಬೇರ್ಪಡಿಸಿ ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಗಾಯಗೊಂಡವರನ್ನು ನೆಲಮಂಗಲ, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.