ಉತ್ತರ ಪ್ರದೇಶ: ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಮದುವೆಗೆ ಕೆಲವೇ ದಿನಗಳು ಬಾಕಿ ಇದ್ದ ವೇಳೆ, ವರನ ಎದುರೇ ವಧುವಿನ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
ಘಟನೆಯ ಬೆನ್ನಲ್ಲೇ ತ್ವರಿತವಾಗಿ ತನಿಖೆ ಕೈಗೊಂಡ ಉತ್ತರಪ್ರದೇಶ ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಎ. 10ರಂದು ಮಧ್ಯಾಹ್ನ ರಸ್ತೆ ಬದಿಯ ಕಾಲುವೆ ಬಳಿ ವಧು ಹಾಗೂ ವರ ಮಾತನಾಡುತ್ತಿದ್ದರು. ಈ ಸಂದರ್ಭ ಇವರನ್ನು ಗಮನಿಸಿದ ಯುವಕರ ತಂಡ, ವರನನ್ನು ಒತ್ತೆಯಾಳಾಗಿಟ್ಟುಕೊಂಡು ಆತನ ಎದುರೇ ವಧುವಿನ ಮೇಲೆ ಒಬ್ಬರಾದ ನಂತರ ಒಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ, ಅತ್ಯಾಚಾರದ ಬಳಿಕ ಜೋಡಿಯ ಬಳಿಯಿದ್ದ ಹಣವನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸದ್ಯ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ಯೋಜಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.