ಭಟ್ಕಳ: ಸ್ಕೂಟರ್ ತೆಗೆಯುತ್ತಿದ್ದಾಗ ಹೃದಯಾಘಾತ; ಕುಸಿದು ಬಿದ್ದು ವ್ಯಕ್ತಿ ಮೃತ್ಯು

  April 15,2025
news-banner
ಭಟ್ಕಳ: ಭಟ್ಕಳದ ಹಾಶಿಮ್ ಬೇಕರಿ ಸಮೀಪ ವ್ಯಕ್ತಿಯೊಬ್ಬರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತಮ್ಮ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಫಜ್ಯೂ‌ರ್ ರೆಹಮಾನ್ ಶೇಕ್ (54) ಎಂದು ಗುರುತಿಸಲಾಗಿದೆ.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೋಟೆಲ್ ನಿಂದ ಹೊರ ಬಂದು ತಾನು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ತೆಗೆಯುತ್ತಿದ್ದ ವೇಳೆ ಏಕಾಏಕಿ ಸ್ಕೂಟರ್ ಸಮೇತ ಅಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ಅಲ್ಲಿದ್ದ ಸಾರ್ವಜನಿಕರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದರಾದರೂ, ಆಸ್ಪತ್ರೆಗೆ ಬರುವ ಮುನ್ನವೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave Your Comments