ಮೂಡಿಗೆರೆ: ಮನೆಯ ಬಾಗಿಲಿನ ಬೀಗವನ್ನು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕೈಮರ ಬೆಟ್ಟದಮನೆ ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬಾಗಿಲಿನ ಬೀಗವನ್ನು ಮುರಿದು ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಸಿಪಿಐ ಮೂಡಿಗೆರೆ ವೃತ್ತ ನೇತೃತ್ವದ ಪೊಲೀಸ್ ತಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೈಮರ ಬೆಟ್ಟದಮನೆ ಗ್ರಾಮದಲ್ಲಿ ಮನೆಯಿಂದ ಕಳವು ಮಾಡಿದ್ದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು ಸೇರಿದಂತೆ ವಿಜಯನಗರ ಜಿಲ್ಲೆ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು ರೂ. 5.52ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.