ಪೊಲೀಸರ ಮೇಲೆ ಹಲ್ಲೆ: ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

  April 15,2025
news-banner
ಶಿವಮೊಗ್ಗ: ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.

ಆರೋಪಿ ನಜರುಲ್ಲಾ ಕಾಲಿಗೆ ಪೊಲೀಸರ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾ ನನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ಪೊಲೀಸ್ ಸಿಬ್ಬಂದಿ ಮೌನೇಶ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್‌ಐ ಚಂದ್ರಶೇಖ‌ರ್ ನಾಯ್ಕ ಗುಂಡು ಹೊಡೆದಿದ್ದಾರೆ ಎಂದು ಹೇಳಲಾಗಿದೆ.

ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.

Leave Your Comments