ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

  April 15,2025
news-banner
ಬೆಂಗಳೂರು: ಸಿಸಿಬಿ ಮಾದಕವಸ್ತು ನಿಗ್ರಹದಳ ಬೆಂಗಳೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದೆ. 

ಒಂದು ಪ್ರಕರಣದಲ್ಲಿ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಬಂಧಿತನ ಬಳಿಯಿದ್ದ 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. 

ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. 

ಬೆಂಗಳೂರು ನಗರದ ಹಲವು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲು ಡ್ರಗ್ಸ್ ಸಾಗಾಟ ಮಾಡಲಾಗುತ್ತಿತ್ತು ಎಂದು ವರದಿಯಾಗಿದೆ.

Leave Your Comments