ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಯುವಕ ಸ್ಥಳದಲ್ಲೇ ಮೃತ್ಯು

  April 15,2025
news-banner
ಯಾದಗಿರಿ: ನಗರದ ಎಪಿಎಂಸಿ ಯಾರ್ಡ್ ಬಳಿ ತನ್ನ ಸಹೋದರಿಯನ್ನು ನೋಡಲು ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನ ಮೇಲೆ ವಿದ್ಯುತ್‌ ತಂತಿ ಬಿದ್ದು ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಮೃತ ಯುವಕ ವಡಿಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿ ಖಾಜಾ ಪಟೇಲ್ (20) ಎಂದು ತಿಳಿದು ಬಂದಿದೆ.

ತನ್ನ ಸಹೋದರಿಯನ್ನು ನೋಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದಿದೆ. ಹೈವೋಲ್ವೇಜ್ ಲೈನ್ ಆಗಿದ್ದ ಕಾರಣ ವಿದ್ಯುತ್ ತಂತಿ ಯುವಕನ ಬೆನ್ನಿನೊಳಗೆ ಹೊಕ್ಕಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Leave Your Comments