ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಬಿಗ್ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಖಾಸಗಿ ಕಾರ್ಯಕ್ರಮ ಮುಗಿದ ಬಳಿಕ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ಈ ಸಂಬಂಧ ಬಸವೇಶ್ವರ ನಗರ ಪೊಲೀಸರು, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಜತ್ ಹಾಗೂ ವಿನಯ್ ಗೌಡ ಅವರನ್ನು ಬಂಧಿಸಿದ್ದರು.
ಕೆಲ ದಿನಗಳ ಬಳಿಕ ನ್ಯಾಯಾಲಯವು ಇಬ್ಬರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹೀಗಾಗಿ ರಜತ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾಮೀನು ಷರತ್ತು ಉಲ್ಲಂಘನೆ ಮಾಡಿದ ರಜತ್‌ನನ್ನು ಪೊಲೀಸರು ಬಂಧಿಸಿ 24ನೇ ಎಸಿಜೆಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆ ರಜತ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.
ಮತ್ತೊಂದು ಕಡೆ ವಿನಯ್ ಗೌಡ ಅವರ ನಿವಾಸಕ್ಕೂ ಪೊಲೀಸರು ಭೇಟಿ ನೀಡಿದ್ದು, ಅವರನ್ನು ಕೂಡ ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.