ಕೊಟ್ಟಾಯಂ: ಎರುಮೇಲಿ ಬಳಿ ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ.
ಘಟನೆ ಸಂಭವಿಸಿದ ಹೆದ್ದಾರಿಯು ತೀಕ್ಷ್ಮವಾದ ತಿರುವುಗಳು ಮತ್ತು ಕಡಿದಾದ ಇಳಿಜಾರನ್ನು ಹೊಂದಿದ್ದು, ಬಸ್ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಉರುಳಿದೆ ಎಂದು ಎರುಮೇಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಗಂಭೀರವಾಗಿ ಗಾಯಗೊಂಡ ಐವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗಳಾದವರನ್ನು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಳು ಮಕ್ಕಳು ಸೇರಿದಂತೆ ಸುಮಾರು 32 ಯಾತ್ರಿಕರು ಬಸ್ಸಿನಲ್ಲಿದ್ದರು ಎಂದು ಅಧಿಕಾರಿ ಹೇಳಿದರು.