ಮಂಗಳೂರು ಉತ್ತರ ಜೆಡಿಎಸ್ ಅಭ್ಯರ್ಥಿ ಮೊಯ್ದೀನ್ ಬಾವ ಮತ್ತೆ ಕಾಂಗ್ರೆಸ್ ಗೆ ?: ಬಾವ ಏನು ಹೇಳಿದ್ರು ಗೊತ್ತಾ?

  May 21,2023
news-banner
ಸುರತ್ಕಲ್: ಈ ಬಾರಿಯ ವಿಧಾನಸಭಾ ಚುನಾವಣೆಯ ವೇಳೆ 
ಕಾಂಗ್ರೆಸ್ ಗೆ ಟಕ್ಕರ್ ನೀಡಿ ಜೆಡಿಎಸ್ ನಲ್ಲಿ ಸ್ಪರ್ಧಿಸಿದ್ದ ಮೊಯ್ದೀನ್ ಬಾವ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಹಾಗಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಮತ್ತು ಸಚಿವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಮೈದೀನ್ ಭಾವ ಬೆಂಗಳೂರಿಗೆ ತೆರಳಿದ್ದರು ಎಂಬ ಮಾತುಗಳು ಹರಿದಾಡುತ್ತಿವೆ.

ಈ ಬಾರಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್ ಟಿಕೆಟ್ ನೀಡಲು ನಿರಾಕರಿಸಿದೆ ಎಂದು ಆರೋಪಿಸಿ ಮೊಯ್ದೀನ್ ಬಾವ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಗೆ ಟಕ್ಕರ್ ನೀಡಿದ್ದರು.

ಚುನಾವಣೆಯಲ್ಲಿ ಪರಾಭವಗೊಂಡ ಅವರು ಬಳಿಕ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಮಯದಲ್ಲಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ಮರಳಿ ಕಾಂಗ್ರೆಸ್ ಸೇರುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ದಟ್ಟವಾಗಿ ಹರಿದಾಡುತ್ತಿದೆ.

ಮೊಯ್ದೀನ್ ಬಾವ ಅವರು ಮರಳಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳುವ ಕುರಿತು ಮಂಗಳೂರು ಉತ್ತರದ ಕೆಲ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರರು ಹರ್ಷ ವ್ಯಕ್ತಪಡಿಸಿದ್ದು ಸ್ವಾಗತಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗಾಳಿ ಸುದ್ದಿಯ ಕುರಿತು ಮೊಯ್ದೀನ್ ಬಾವ ಅವರಲ್ಲಿ eಸಮಯ ಮಾತನಾಡಿದ್ದು, " ಇಲ್ಲ ನಾನು ಕಾಂಗ್ರೆಸ್ ಗೆ ಹೋಗುವ ಯಾವುದೇ ತಯಾರಿ ಮಾಡಿಕೊಂಡಿಲ್ಲ. ನಾನು ಹೋಗುವುದೂ ಇಲ್ಲ. ನನಗೆ ಮೋಸಮಾಡಿದವರ ಜೊಗೆ ಇನ್ನು ಸೇರುವುದಿಲ್ಲ. ಮಂಗಳೂರು ಉತ್ತರ ಸೇರಿ ದ.ಕ., ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ನ್ನು ಬಲಿಷ್ಠವಾಗಿ ಕಟ್ಟಲಾಗುವುದು" ಎಂದು ಸ್ಪಷ್ಟನೆ ನೀಡಿದ್ದಾರೆ.

Leave Your Comments